ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ. ಇಲ್ಲಿನ ಸರಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಪ್ರಗತಿ ಪಥ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ