ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅಪ್ರಾಪ್ತ ಬಾಲಕನೋರ್ವ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಸಿದ್ಧವಾಗುತ್ತಿದ್ದು, ಈ ಬೆನ್ನಲ್ಲೇ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೋಮವಾರ ರಾತ್ರಿ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದ. ಇದು ಎಲ್ಲೆಡೆ ವೈರಲ್ ಅಗಿದ್ದು, ವಿಷಯ ತಿಳಿದು ಕುಪಿತರಾದ