ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಜನವರಿ 19ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ 28ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ವೇದಿಕೆ