ಬೆಳಗಾವಿ : ಸಾಲಮನ್ನಾ ವಿಚಾರದಲ್ಲಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಇದೀಗ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ. ನಾಲ್ಕು ಕಂತುಗಳಲ್ಲಿ ಬ್ಯಾಂಕ್ ಗಳಿಗೆ ಹಣ ತುಂಬುತ್ತೇನೆ. ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಇಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುತ್ತೇನೆ. 4 ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದಾರೆ.