ರಾಜ್ಯ ವ್ಯಾಪ್ತಿ ಧೂಮಪಾನ ಸೇವನೆಯನ್ನು ಸಂಪೂರ್ಣ ನಿಷೇಧ ಮಾಡುವ ಸಂಬಂಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.ಬೆಂಗಳೂರು ನಗರದಲ್ಲಿಂದು ಮಲ್ಲೇಶ್ವರ ಬಿಬಿಎಂಪಿ ಕಚೇರಿಯಲ್ಲಿ ಧೂಮಪಾನ ಮುಕ್ತ ಬೆಂಗಳೂರು ಅಭಿಯಾನದ ವರದಿ ಹಾಗೂ ಮೊಬೈಲ್ ಆಫ್ ಬಿಡುಗಡೆ ಮಾಡಿ ಮಾತನಾಡಿದರು.ಗುಜರಾತ್ ರಾಜ್ಯದಲ್ಲಿ ಲಿಕ್ಕರ್ ಬ್ಯಾನ್ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಸಿಗರೇಟು ಸೇವನೆ ಬ್ಯಾನ್ ಮಾಡಬಹುದೇ ಪರಿಶೀಲಿಸಿ.