ತಮ್ಮ ಮಗಳ ವಿರುದ್ಧದ ಆಧಾರ ರಹಿತ ಮತ್ತು ಸುಳ್ಳು ಆರೋಪಗಳಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್ ಮತ್ತು ಪವನ್ ಖೇರಾ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಸ್ಮೃತಿ ಇರಾನಿ ಅವರ ಮಗಳು ಝೋಯಿಶ್ ಇರಾನಿ ಅವರು ಮೃತರೊಬ್ಬರ ಹೆಸರಿನಲ್ಲಿ ಗೋವಾದಲ್ಲಿ ಬಾರ್ ನಡೆಸುತ್ತಿದ್ದಾರೆ. ಹೀಗಾಗಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ನಾಯಕರು ಆಗ್ರಹಿಸಿದ