ಈರುಳ್ಳಿ ಆಯ್ತು ಈಗ ಬೆಳ್ಳುಳ್ಳಿ ಸರದಿ. ಗಗನಕ್ಕೇರಿರುವ ಬೆಳ್ಳುಳ್ಳಿ ಬೆಲೆ ಸಾಮಾನ್ಯ ಗ್ರಾಹಕನ ಜೇಬು ಸುಡುತ್ತಿದೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300-400ರೂ. ತಲುಪಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಳ್ಳುಳ್ಳಿ ಇಳುವರಿ ಕಡಿಮೆಯಾದ ಕಾರಣ, ಮಹಾರಾಷ್ಟ್ರದಿಂದ ಪೂರೈಕೆ ತಗ್ಗಿದೆ.