ಬೆಂಗಳೂರು : ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಮಳೆ ಇರಲಿ, ಚಳಿ ಇರಲಿ ಅಥವಾ ಯಾವುದೇ ತುರ್ತು ಸಂದರ್ಭವೂ ಇರಲಿ.