ಕೋಟ್ಯಂತರ ಭಕ್ತರ ಆಶಯದಂತೆ ನಿರ್ಮಾಣ ಗೊಳ್ಳುತ್ತಿರುವ ಅಯೋಧ್ಯೆ ರಾಮ ಮಂದಿರ ದಲ್ಲಿ ಶ್ರೀರಾಮನಿಗೆ ಪ್ರತ್ಯೇಕ ಹರಕೆ ಸೇವೆ ಎಂಬುದು ಇರುವುದಿಲ್ಲ. ಬದಲಾಗಿ ಪ್ರತಿ ಯೊಬ್ಬ ಭಕ್ತರು ಮಾಡಿದ ಸಮಾಜ ಸೇವೆಯನ್ನು ರಾಮನ ಸಾನ್ನಿಧ್ಯದಲ್ಲಿ ನಿವೇದಿಸಿಕೊಳ್ಳುವ ರಾಮಾರ್ಪಣೆಯೇ ಸೇವೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರೂ ಆಗಿರುವ ಅವರು ಉಡುಪಿ ಮತ್ತು ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಾಮ ಮಂದಿರದ