ನವದೆಹಲಿ : ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ಬಾಡಿಗೆದಾರರ ಮಗುವನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ. ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಹಣಕ್ಕಾಗಿ ಸಾಫ್ಟ್ ವೇರ್ ಇಂಜಿನಿಯರ್ ಬಾಡಿಗೆದಾರನ ಮನೆಗೆ ಬಂದು ಮಗುವನ್ನು ಅಪಹರಿಸಿ 40ಲಕ್ಷ ರೂಗೆ ಬೇಡಿಕೆ ಇಟ್ಟಿದ್ದಾನೆ.ಈ ಬಗ್ಗೆ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯ ಬೆನ್ನಟ್ಟಿದ ಪೊಲೀಸರು ಆತನನ್ನು ಹಿಡಿದು ಮಗುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.