ಮೈಸೂರು : ನನ್ನ ಬಗ್ಗೆ ವರುಣಾ ಜನರಿಗೆ ಅಪಾರವಾದ ಪ್ರೀತಿಯಿದೆ. ನನ್ನ ಮತ್ತು ವರುಣಾ ಸಂಬಂಧವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾದ ಸೋಮಣ್ಣನಿಗೂ ವರುಣಾ ಕ್ಷೇತ್ರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಅವರನ್ನು ಬಲವಂತವಾಗಿ ಈ ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವನು ನಮ್ಮ ಜಿಲ್ಲೆಯವನೂ