ಬಿಜೆಪಿ ಒಡೆದ ಮನೆಯಂತಾಗಿದ್ದು. ಆ ಪಕ್ಷದ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲಿಯೇ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ವಾಪಸ್ ಕರೆತಂದಾಗಲೇ ಬಿಜೆಪಿ ಪಕ್ಷ ಒಡೆದು ಹೋಗಿದೆ. ಅಧಿಕಾರ ಇಲ್ಲದೆ ಈ ರೀತಿ ಕಚ್ಚಾಡುವವರು, ಅಧಿಕಾರ ಬಂದ ಮೇಲೆ