ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಗ ಹಾಗೂ ಸೊಸೆ ಸೇರಿಕೊಂಡು ವೃದ್ಧನ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ ನೀಡಿದ ಹೇಯ ಕೃತ್ಯ ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಾಜಣ್ಣ ಎಂಬುವವರು ಚಿತ್ರಹಿಂಸೆಗೆ ಒಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು, ಇವರ ಮಗ ನವೀನ್ ಹಾಗೂ ಸೊಸೆ ಸೌಮ್ಯ ಆಸ್ತಿಯ ಆಸೆಗಾಗಿ ತಂದೆಯನ್ನು ಮನೆಯಲ್ಲಿ ಕೂಡಿಹಾಕಿದ್ದರು. ಸಾಲದಕ್ಕೆ ಅವರ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ