ರಾಜ್ಯ ಸಂಪುಟ ವಿಸ್ತರಣೆ ಸಲುವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ರಾಜ್ಯ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಮಾತುಕತೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಸೋನಿಯಾ ಅವರೊಂದಿಗೆ ಸುಮಾರು ಅರ್ಧ ಗಂಟೆ ಚರ್ಚಿಸಿದ್ದೇನೆ. ಈ ವೇಳೆ ರಾಜ್ಯ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಿದ್ದು, ಎಲ್ಲಾ ವಿವರಗಳನ್ನು ನೀಡಿದ್ದೇನೆ. ಇದೇ ವೇಳೆ, ರಾಜ್ಯದಲ್ಲಿರುವ