ರಾಜ್ಯದಲ್ಲಿ ಕಾಣಿಸಿಕೊಂಡಿರುವ ಮಲಪ್ರಭಾ-ಮಹಾದಾಯಿ ಸಮಸ್ಯೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಕಾರಣ ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಮಲಪ್ರಭಾ-ಮಹಾದಾಯಿ ನದಿ ಜೋಡಣೆಗೆ ಒತ್ತಾಯಿಸಿ ಕುಡಿಯಯುವ ನೀರಿಗಾಗಿ ಕಳೆದ ಹಲವು ವರ್ಷಗಳಿಂದ ನಡೆಸಲಾಗುತ್ತಿರುವ ಹೋರಾಟದಲ್ಲಿ ಸಫಲತೆ ಕಾಣದೆ ಸಮಸ್ಯೆಯಾಗಿಯೇ ಉಳಿಯಲು