ಪಶುಸಂಗೋಪನಾ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ, ಸಚಿವರಾದ ಶ್ರೀ ಪ್ರಭು ಚೌಹಾಣ್ ಅವರು ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೆಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ವಿವಿಧ ಕೇಂದ್ರಗಳ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇಲಾಖೆಯ