ರಾಮನಗರ : ಸಾತನೂರು ಸಮೀಪದ ಭೂಹಳ್ಳಿ ಗ್ರಾಮದಲ್ಲಿ ನಿಧಿ ಆಸೆಗೆ ಕಳೆದ ಅನೇಕ ವರ್ಷಗಳಿಂದ ಪೂಜೆ ಸಲ್ಲಿಸಿ, ವಾಮಾಚಾರ ನಡೆಸುತ್ತಿದ್ದವರನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆ ನೀಡಿದ್ದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ ಸಾತನೂರು ಪೊಲೀಸರು, ಬರೊಬ್ಬರಿ 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಏನಿದು ಘಟನೆ? ಸಾತನೂರು ಹೋಬಳಿಯ ಭೂಹಳ್ಳಿ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಳೆದ ಅನೇಕ ವರ್ಷಗಳಿಂದಲೂ ವಾಮಾಚಾರ