ರಾಜ್ಯದ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರ ಮಗನ ಮದುವೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ವಿಚಾರದಲ್ಲಿ ಹರಪನಹಲ್ಲಿ ತಹಸಿಲ್ದಾರ್ ಅವರಿಂದ ಖಾಸಗಿ ದೂರು ದಾಖಲು ಮಾಡಲು ಸೂಚಿಸಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ. ಮದುವೆಯಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. 50 ಜನಕ್ಕೂ ಹೆಚ್ಚು ಜನರು ಪಾಲ್ಗೊಳ್ಳಬಾರದು ಎನ್ನುವ ನಿಯಮ ಇದೆ.