ಕಲಬುರಗಿ : ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಆರೋಪ 3 ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಬಿಜೆಪಿ ದೃತಿಗೆಟ್ಟಿದೆ. ಇದನ್ನು ನೋಡಿ ಬಿಜೆಪಿಯವರು ಹಣ ಹಂಚುತ್ತಿದ್ದಾರೆ. ಅವರನ್ನು ಅನರ್ಹ ಮಾಡಿ ಬಂಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೆ ಚುನಾವಣಾ ಆಯೋಗ ಮಧ್ಯಪ್ರವೇಶಿಸಲಿ. ಹಣ ಹಂಚಿಕೆ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ. ನಮ್ಮ ಕಾರ್ಯಕರ್ತರು ಈ ಬಗ್ಗೆ ದೂರು ನೀಡುತ್ತಾರೆ ಎಂದು ಹೇಳಿದ್ದಾರೆ.ಈ