ಬೆಂಗಳೂರು ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ -19 ಸೋಂಕಿನಿಂದ ಬಾಧಿತರಾಗದಂತೆ ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಅವರು, ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಮಕ್ಕಳಲ್ಲಿ ಕೋವಿಡ್ -19 ಸಾಂಕ್ರಾಮಿಕವನ್ನು ನಿಗ್ರಹಿಸುವ ರೋಗ ನಿರೋಧಕ ಶಕ್ತಿ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ