ಹುಬ್ಬಳ್ಳಿ : ಇತ್ತೀಚೆಗೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ಸಾರ್ವಜನಿಕ ರಜೆ ದಿನಗಳಂದು ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಲವಾರು ಜಲಪಾತಗಳು ಮೈದುಂಬಿ ಕೊಂಡಿವೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಾರಾಂತ್ಯ ಹಾಗೂ ರಜೆ ದಿನಗಳಂದು ಹುಬ್ಬಳ್ಳಿಯಿಂದ ಜೋಗ ಫಾಲ್ಸ್, ಧಾರವಾಡ