ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್ ಪುಷ್ಪಾ ಅವರು KSRTC, BMTC ಸೇರಿದಂತೆ 4 ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆ ಸರಿದೂಗಿಸಲು ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.