ನಾಡಿನೆಲ್ಲೆಡೆ ದೀಪಾವಳಿ ಸಡಗರ ಮನೆ ಮಾಡಿದೆ. ಲಕ್ಷ್ಮಿ ಪೂಜೆಯನ್ನು ಜನರು ಭಕ್ತಿಯಿಂದ ಮಾಡ್ತಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.ಜಿಲ್ಲೆಗಳ ದೇವಸ್ಥಾನಗಳಲ್ಲಿ ಗೋಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಆಯಾ ಜಿಲ್ಲೆಯ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ