ಸರಕಾರದಿಂದ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಹೆಸರು ನೋಂದಣಿ ಮಾಡುವಂತೆ ಸೂಚಿಸಲಾಗಿದೆ. ಕೊರೋನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ ಉತ್ತರ ಪ್ರದೇಶ ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಕಲಬುರಗಿಯಿಂದ ಲಖನೌ ಉತ್ತರ ಪ್ರದೇಶಕ್ಕೆ ತೆರಳಲು ಮೇ 19 ರಂದು ರಾತ್ರಿ 8 ಗಂಟೆಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.ರೈಲು ಮುಖಾಂತರ ಪ್ರಯಾಣ ಬೆಳೆಸಲಿಚ್ಛಿಸುವ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ತಮ್ಮ