ಬೆಂಗಳೂರು : ಎನ್ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ (ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ-2022ರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಪಾಲ್ಗೊಂಡು, ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ,ತಳ ಹಂತ ಪೊಲೀಸರು ಹಾಗೂ ಐಪಿಎಸ್ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ.