ಹಾಸನ : ಶ್ರವಣಬೆಳಗೊಳ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ವಿಧಿವಶರಾಗಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈ ನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದರು. ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.