ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ನಡುವಿನ ಬಹಿರಂಗ ಜಗಳ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಶ್ವರಪ್ಪ ಬಣಕ್ಕೆ ಟಾಂಗ್ ಕೊಡಲು ವಿ. ಶ್ರೀನಿವಾಸ್ ಪ್ರಸಾದ್ ಅವರನ್ನ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಯಡಿಯೂರಪ್ಪ ಆದೇಶಿಸಿದ್ದಾರೆ. ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ಸೋತಿದ್ದರೂ ಶ್ರೀನಿವಾಸ್ ಪ್ರಸಾದ್ ಒಂದಷ್ಟು ಮತದಾರರನ್ನ ಹಿಡಿದಿಟ್ಟುಕೊಳ್ಳುವಲ್ಲಿ ಶ್ರೀನಿವಾಸ್ ಪ್ರಸಾದ್ ಯಶಸ್ವಿಯಾಗಿದ್ದರು. ಜೊತೆಗೆ ದಲಿತ ನಾಯಕನಿಗೆ ಪಟ್ಟ ಕಟ್ಟುವ ಮೂಲಕ ಭಿನ್ನಮತೀಯರ ವಿರುದ್ಧ