ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗುಬ್ಬಿ ಶಾಸಕ ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವರಿಷ್ಛ ಎಚ್.ಡಿ.ದೇವೇಗೌಡರ ಕಾರಿಗೆ ಶ್ರೀನಿವಾಸ ಪರ ಬೆಂಬಲಿಗರು ಘೇರಾವ್ ಹಾಕಿದ ಘಟನೆ ವರದಿಯಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪರ ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯ ಭನದಲ್ಲಿ ನಡೆಯುತ್ತಿದ್ದ ಪ್ರಚಾರ ಸಭೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ಜೆ ಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೆಗೌಡರ ಕಾರಿಗೆ ಅಡ್ಡಹಾಕಿ ಒತ್ತಾಯಿಸಲಾಯಿತು.