ನಾಳೆ 12 ಗಂಟೆಗೆ ಸಭಾಪತಿ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ಶಾಸಕ ರಾಜೀನಾಮೆ ಸಲ್ಲಿಸುತ್ತೇನೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೂ ಗುಡ್ ಬೈ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಮತ್ತೆ ಸ್ಪಷ್ಟಪಡಿಸಿದ್ದಾರೆ. ಪಕ್ಷ ತೊರೆದ ನಂತರ, ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಡೆಯನ್ನಿಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ನನಗೆ ಎಲ್ಲ ಪಕ್ಷದಲ್ಲೂ ಒಳ್ಳೆಯ ಸ್ನೇಹಿತರಿದ್ದಾರೆ. ಬಿಜೆಪಿಯ ಹಲವು ನಾಯಕರು ನನ್ನ