ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪಕ್ಷದ ವಿರುದ್ಧ ಬಂಡೆದ್ದು ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಬಿಜೆಪಿ ಸೇರುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕ್ಷೇತ್ರದ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಚುನಾವಣೆಗಿಂತ ಮುಂಚೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹಿನ್ನೆಡೆ