ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಮೇಲೆ ಶ್ರೀರಾಮುಲು ಕಿಡಿ

ರಾಯಚೂರು| pavithra| Last Modified ಬುಧವಾರ, 7 ಏಪ್ರಿಲ್ 2021 (13:55 IST)
ರಾಯಚೂರು : ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಚಾರದ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಮಾತನಾಡಿದ ಶ್ರೀರಾಮುಲು , ಸಿದ್ದರಾಮಯ್ಯ ಭ್ರಷ್ಟ ಡಿಕೆಶಿಯನ್ನು ಪಕ್ಷದಲ್ಲಿ ಕೂರಿಸಿಕೊಂಡು ರಾಜ್ಯ ಸರ್ಕಾರದ ಭ್ರಷ್ಟಚಾರದ ಬಗ್ಗೆ ಮಾತನಾಡುತ್ತಾರೆ. ಸಿದ್ದರಾಮಯ್ಯಗೆ ನಾಚಿಕೆಯಾಗಬೇಕೆಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಡಿಕೆಶಿ ಎಷ್ಟು ಲೂಟಿ ಮಾಡಿದ್ದಾರೆ. ಅವರ ಮೇಲೆ ಎಷ್ಟು ಕೇಸ್ ಇದೆ ಎಂದು ಜನರಿಗೆ ಗೊತ್ತಿದೆ. ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರವಾಗಿತ್ತು. ಎಲ್ಲದಕ್ಕೂ 10 ಪರ್ಸೆಂಟ್ ತೆಗೆದುಕೊಳ್ಳುತ್ತಿದ್ದರು ಎಂದು ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :