ಬೆಂಗಳೂರು(ಜು.22): ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಎರಡನೇ ಪರೀಕ್ಷೆ ನಡೆಯಲಿದೆ. ಕನ್ನಡ, ಇಂಗ್ಲಿಷ್, ಹಿಂದಿ ಮೂರು ಭಾಷಾ ವಿಷಯಗಳಿಗೆ ಇಂದು ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 10.30ರಿಂದ 1.30ರವರೆಗೆ ಒಟ್ಟು ಮೂರು ವಿಷಯಗಳಿಗೆ 120 ಅಂಕಗಳ ಪರೀಕ್ಷೆ ನಡೆಯಲಿದೆ.ಜುಲೈ 19ರಂದು ಅಂದರೆ ಕಳೆದ ಸೋಮವಾರ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮೂರು ವಿಷಯಗಳಿಗೆ ಪರೀಕ್ಷೆ ನಡೆದಿತ್ತು. ಇಂದು ಉಳಿದ ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಹಿಂದಿ ವಿಷಯಗಳಿಗೆ ಪರೀಕ್ಷೆ