ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಂದು ಮಹತ್ವದ ದಿನ. ಇಂದು ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.ಮಧ್ಯಾಹ್ನ 1 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇದನ್ನು kseeb.kar.nic.in ಅಥವಾ karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23 ರಿಂದ ಏಪ್ರಿಲ್ 6 ರವರೆಗೆ ಪರೀಕ್ಷೆ ನಡೆದಿತ್ತು. ಒಂದು ವೇಳೆ ಫೇಲ್ ಆದರೂ ವಿದ್ಯಾರ್ಥಿಗಳು ಆತಂಕಪಡಬೇಕಾಗಿಲ್ಲ. ಮತ್ತೊಂದು ಅವಕಾಶ ಇದ್ದೇ