ಕೊರೊನಾ ಅಬ್ಬರ ಇಳಿಕೆ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಹಾಗೂ ಸಮಾಜ ಪರೀಕ್ಷೆ ನಡೆಯಲಿದ್ದು, 22ರಂದು ಭಾಷಾ ವಿಷಯಗಳಾದ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು ಮೂರು ವಿಷಯಗಳಿಗೆ 120 ಅಂಕಗಳಿಗಾಗಿ ಆಬ್ಜೆಕ್ಟಿವ್ ಮಾದರಿಯಲ್ಲಿ, ಒಎಂಆರ್ ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೆ