ಬೆಂಗಳೂರು : ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ಪ್ರಥಮ ಭಾಷೆ ವಿಷಯಗಳ ಪರೀಕ್ಷೆ ನಡೆಯಲಿದೆ. ಇನ್ನು ಈ ಬಾರಿ ಒಟ್ಟು 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 4 ಲಕ್ಷದ 47 ಸಾವಿರದ 864 ಬಾಲಕರು ಹಾಗೂ 3 ಲಕ್ಷದ 93 ಸಾವಿರದ 802 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 2857 ಪರೀಕ್ಷೆ ಕೇಂದ್ರಗಳಿದ್ದು,