ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಗಳ ವ್ಯವಸ್ಥೆ ಮಾಡಲಾಗಿದೆ. ಜೂನ್ 25 ರಿಂದ ಜುಲೈ 4ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್ಮೆಂಟ್ ಝೋನ್ ಮತ್ತು ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೋಣೆ ಕಾಯ್ದಿರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್