ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ ಪೂರ್ಣ 625 ಅಂಕ ಪಡೆದು ನಂ.1 ಸ್ಥಾನ ಪಡೆದಿದ್ದಾರೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾರ್ಚ್ 28ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು. ಈ ಬಾರಿ 145 ವಿದ್ಯಾರ್ಥಿಗಳು 625ಕ್ಕೆ ಪೂರ್ಣ ಅಂಕ ಪಡೆದು ದಾಖಲೆ ಬರೆದಿದ್ದಾರೆ. ಇದರಲ್ಲಿ 21 ಮಕ್ಕಳು ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರೆ, 8