ಆರು ದಿನ ನಡೆಯುತ್ತಿದ್ದ ಪರೀಕ್ಷೆಯನ್ನ ಈ ಬಾರಿ ಎರಡೇ ದಿನದಲ್ಲಿ ಪರೀಕ್ಷೆ ಮುಗಿಸಿದೆ. ಇಂದು ಬಹಳ ಕಾತರದಿಂದ ಕಾಯುತ್ತಿದ್ದ ಫಲಿತಾಂಶ ಹೊರಬಿದ್ದಿದೆ. ಒಬ್ಬ ವಿದ್ಯಾರ್ಥಿನಿ ಬಿಟ್ಟರೆ ಉಳಿದವರೆಲ್ಲರೂ ಪಾಸ್ ಆಗಿದ್ದಾರೆ. 2020-21ರ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ನೂತನ ಶಿಕ್ಷಣ ಸಚಿವ ನಾಗೇಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 8.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 99.9 ಮಕ್ಕಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದಂತ 4,70,160 ಬಾಲಕರು ಕೂಡ