ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರವೊಂದು ಜಾತ್ರೆಯಂತೆ ಸಿಂಗಾರಗೊಂಡು ಗಮನ ಸೆಳೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಬರೆಯಲು ಬಂದಂತಹ ವಿದ್ಯಾರ್ಥಿಗಳು ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಆತಂಕಗೊಳಗಾದೇ ಪರೀಕ್ಷೆಯನ್ನು ಎದುರಿಸಲು ಗ್ರಾಮ ಪಂಚಾಯಿತಿ ಹಾಗೂ ಶಾಲಾ ಆಡಳಿತ ಮಂಡಳಿ ಸಕಲ ಸಿದ್ಧತೆಯನ್ನು ಮಾಡುವ ಮೂಲಕ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಿತ್ತು.ಪರೀಕ್ಷಾ ಕೇಂದ್ರದ ಹೊರಗಡೆ ವಿದ್ಯಾರ್ಥಿಗಳ ಸ್ವಾಗತಕ್ಕೆ ಬಾಳೆ