ಮೈಸೂರು : ಸಿಎಂ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹೇಳಿಕೆಗೆ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಹೇಳ್ತಾರೋ ಗೊತ್ತಾಗಲ್ಲ. ಸಿದ್ದರಾಮಯ್ಯ ಬಿಡುವಿನ ವೇಳೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅವರು ಪದೇ ಪದೇ ಈ ರೀತಿಯಾಗಿ ಹೇಳುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಅದನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಈ ರೀತಿ ಹೇಳ್ತಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ