ಆಪರೇಷನ್ ಕಮಲದ ಆಡಿಯೋ ಗದ್ದಲ ಇನ್ನೂ ಮುಗಿದಿಲ್ಲ. ಈ ನಡುವೆ ಕಲ್ಲು ತೂರಾಟದ ಪ್ರಕರಣ ಸದ್ದು ಮಾಡಲಾರಂಭಿಸಿದೆ. ಹಾಸನದ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಿರುವ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಹೀಗಂತ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರದಿಂದ ಈ ಕುರಿತು ವರದಿ ಪಡೆದು ಸಮಗ್ರ ತನಿಖೆಗೆ ಆದೇಶಿಸಬೇಕು ಎಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ