ಕಲಬುರಗಿಯಲ್ಲಿ ರಿಯಲ್ ಎಸ್ಟೇಟ್ ಉದ್ಯೋಗ ಮಾಡುತ್ತಿದ್ದ ಮಹಮ್ಮದ್ ಇಸಾಮುದ್ದೀನ್ಗೆ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ಚಾಕು ಇರಿದಿದ್ದಾರೆ. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಆತನಿಗೆ ಚಾಕುವಿನಿಂದ ಇರಿಯಲಾಗಿದೆ. ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಆತನಿಗೆ ಚಾಕು ಇರಿಯಲಾಗಿದೆ. ಗಾಯಾಳು ಮಹಮ್ಮದ್ ಇಸಾಮುದ್ದೀನ್ನನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಘಟನೆಯು