ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ.ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಲ್ಲಿ ನೀರು ನಿಂತಿರುವುದರಿಂದ, ವಾಹನಗಳಿಗೆ ಹೋಗಲು ಅನುಕೂಲವಾಗುವಂತೆ ಪರ್ಯಾಯ ಮಾರ್ಗಕ್ಕೆ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಆಯಾಯ ಡಿಸಿಗಳ ಜೊತೆ ಚರ್ಚೆ ಮಾಡಿದ್ದು, ರಾಷ್ಟ್ರೀಯ