ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಸೋಮವಾರದಿಂದ (ಮೇ.16) ಆರಂಭವಾಗಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮತ್ತೊಂದೆಡೆ, ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ. ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಮಾಡಬೇಕು. ಇದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಲು ನಿರ್ಧರಿಸಲಾಗಿದೆ. ಶಾಲೆಗಳಲ್ಲಿ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಮಕ್ಕಳನ್ನು ಸ್ವಾಗತಿಸಬೇಕು. ಹಾಜರಾತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ