ಹೆಲಿಕಾಪ್ಟರ್ ಜಾಲಿ ರೈಡ್ ಗೆ ಅದ್ಧೂರಿ ಚಾಲನೆ ನೀಡಲಾಗಿದೆ.ಮಂಡ್ಯದಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ಕೆಆರ್ ಎಸ್ ಹಿನ್ನೀರಿನ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಜಾಲಿರೈಡ್ ಹಾಗೂ ಜಲ ಸಾಹಸೋತ್ಸವ ನಡೆಯಿತು.ಈ ಕಾರ್ಯಕ್ರಮವನ್ನ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ಉಪವಿಭಾಗಾಧಿಕಾರಿ ಶೈಲಜಾ ಹಾಗೂ ಪ್ರವಾಸೋದ್ಯಮ ಉಪ ನಿರ್ದೇಶಕ ಹರೀಶ್ ಉಪಸ್ಥಿತರಿದ್ದರು.