ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 4 ರಿಂದ 23ರ ವರೆಗೆ ಜರುಗಲಿವೆ. ಕಲಬುರಗಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ಪರೀಕ್ಷೆ ನಡೆಯಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೂಟ್ ಅಧಿಕಾರಿಗಳು ಮತ್ತು ಪರೀಕ್ಷಾ ಕೇಂದ್ರದ ಮುಖ್ಯ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಲಬುರಗಿ ನಗರದ