ಮುಂದಿನ ಹಣಕಾಸು ವರ್ಷದ ಬಜೆಟ್ ಫೆಬ್ರವರಿ 17ಕ್ಕೆ ಮಂಡನೆಯಾಗುವ ಸಾಧ್ಯತೆಗಳಿದ್ದು, ಅಗತ್ಯವಾದ ಪೂರ್ವ ತಯಾರಿಗಳು ನಡೆದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಜನಪರ, ಜನಕಲ್ಯಾಣದ ಯೋಜನೆಗಳಿರಲಿವೆ.ದುಡಿಯುವ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂಬ ಸುಳಿವು ನೀಡಿದರು.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದ ದಿನಾಂಕ ಗೊತ್ತುಪಡಿಸಲಾಗುವುದು. ಪ್ರಸಕ್ತ ಹಣಕಾಸು ವರ್ಷದ ಮೂರು ತ್ರೈಮಾಸಿಕ