ಬೆಂಗಳೂರು : ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ 2021-2022ರ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗಕ್ಕೆ ಅವಕಾಶ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ, 2 ಕೋಟಿ ರೂ.ವರೆಗೂ ಮಹಿಳಾ ಉದ್ಯಮಿಗಳಿಗೆ ಸಾಲ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ