ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಲಾಲ್ ಬಾಗ್ ಗೇಟ್ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, ಪ್ರಧಾನಿ