ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಇಲಿಯಾಸ್ ಕೊಲೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಯಾರನ್ನು ಹತ್ಯೆ ಮಾಡ್ತಾರೋ ಗೊತ್ತಿಲ್ಲ. ಗುಪ್ತಚರ ಇಲಾಖೆ ಇದ್ದರೂ ಸರ್ಕಾರ ಅಪರಾಧಗಳನ್ನು ತಡೆಯಲು ಕ್ರಮ ಜರುಗಿಸುತ್ತಿಲ್ಲ ಎಂದು ದೂರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿ ಹಿಂದೂ-ಮುಸ್ಲಿಂ ಮಧ್ಯೆ ಜಗಳ ಹಚ್ಚುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.